ತಿರುಪತಿಯಲ್ಲಿ (Thirupathi )ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸವನ್ನು ಬೆರೆಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಆದರೆ ಇದೀಗ ಟಿಡಿಪಿ ಪುರಾವೆ ಸಹಿತ ಇದನ್ನು ಬಹಿರಂಗಪಡಿಸಿದೆ.
ಈ ಬಗ್ಗೆ ಟಿಡಿಪಿ ನಾಯಕ ಆನಂ ವೆಂಕಟ ರಮಣ ರೆಡ್ಡಿ ಅವರು ತುಪ್ಪವನ್ನು ಪರೀಕ್ಷಿಸಿದ ವಿವಿಧ ಪ್ರಯೋಗಾಲಯಗಳ ವರದಿಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದಾರೆ.
ತಿರುಪತಿ ಲಡ್ಡುಗೆ ದನದ ಕೊಬ್ಬು ಬಳಕೆ ಎನ್ನುವ ಮಾಹಿತಿ!
ತಿರುಪತಿ (Thirupathi )ತಿರುಮಲ ದೇವಸ್ಥಾನಕ್ಕೆ ಪೂರೈಕೆಯಾಗುವ ತುಪ್ಪವನ್ನು ದೇಶದಲ್ಲೇ ಪ್ರಸಿದ್ಧವಾಗಿರುವ ಎನ್‌ಡಿಡಿಬಿ ಕ್ಯಾಲ್ಫ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗಿದೆ. ಸೋಯಾಬೀನ್, ಕುಸುಬೆ, ಆಲಿವ್, ಗೋಧಿ ಹುರುಳಿ,, ಹತ್ತಿ ಬೀಜಗಳು, ಮೀನಿನ ಎಣ್ಣೆ, ಬೀಫ್ , ತಾಳೆ ಎಣ್ಣೆ ಮತ್ತು ಹಂದಿ ಕೊಬ್ಬನ್ನು ಸಹ ಈ ತುಪ್ಪದಲ್ಲಿ ಬಳಸಲಾಗಿದೆ. ತಿರುಪತಿ (Thirupathi) ತಿರುಮಲ ದೇವಸ್ಥಾನಕ್ಕೆ ಗುತ್ತಿಗೆದಾರರು ಪೂರೈಸಿದ ತುಪ್ಪದಲ್ಲಿ ಶೇ.19ರಷ್ಟು ಮಾತ್ರ ತುಪ್ಪ ಇರುವುದು ಪತ್ತೆಯಾಗಿದೆ ಎಂದು ವರದಿಯಲ್ಲಿ ನೋಡಬಹುದು.