ಅ.20 : ಬೆಂಗಳೂರಿನಲ್ಲಿ ಉದ್ಯೋಗ ಮೇಳ (Job Fair)
ಕೇಂದ್ರ ಸರ್ಕಾರದ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಅ.20 ರಂದು ಉದ್ಯೋಗ ಮೇಳ ನಡೆಯಲಿದೆ.
ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಯು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನ್ಯಾಷನಲ್ ಕೇರಿಯರ್ ಸರ್ವಿಸ್, ಕರ್ನಾಟಕ ಸರಕಾರದ ಕೌಶಲಾಭಿವೃದ್ಧಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆ.ಎಲ್.ಇ. ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯ, 2ನೇ ಬ್ಲಾಕ್, ರಾಜಾಜಿನಗರದಲ್ಲಿ ಉದ್ಯೋಗ ಮೇಳ (Job Fair). ರಾಜ್ಯದ ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲ ವಲಯದಲ್ಲಿ 100ಕ್ಕೂ ಹೆಚ್ಚಿನ ಪ್ರತಿಷ್ಟಿತ ಬೃಹತ್/ಮಧ್ಯಮ/ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡದ ಉದ್ಯೋಗಾಕಾಂಕ್ಷಿಗಳು https://jobfair.Calicut.nielit.in ಗೆ ಭೇಟಿ ನೀಡಿ ತಮ್ಮ ಸ್ವವಿವರಗಳನ್ನು ಉಚಿತವಾಗಿ ನೋಂದಣಿ ಮಾಡಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.