Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh

ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್ ಚಾಂಪಿನ್ ಶಿಪ್(World Chess Championship) :

ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್​ ಚಾಂಪಿಯನ್​​ಶಿಪ್​ನಲ್ಲಿ (World Chess Championship) ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ (D.Gukesh) ಚಾಂಪಿಯನ್​​ ಪಟ್ಟವನ್ನು ಅಲಂಕರಿಸಿದ್ದಾರೆ. ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಗುಕೇಶ್​ ಚಾಂಪಿಯನ್​ ಆಗಿದ್ದಾರೆ.

D. Gukesh

ಚಿಕ್ಕ ವಯಸ್ಸು ದೊಡ್ಡ ಯಶಸ್ಸು ಕಂಡ ಗುಕೇಶ್ (D.Gukesh):

18 ವರ್ಷದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ ಮತ್ತು 32 ವರ್ಷ ವಯಸ್ಸಿನ ಹಾಲಿ ಚಾಂಪಿಯನ್‌ ಲಿರೆನ್‌ ನಡುವೆ ನಡೆದ 13 ಪಂದ್ಯಗಳು ಡ್ರಾ ಆಗಿದ್ದವು. ಆ ಮೂಲಕ ಇಬ್ಬರೂ ತಲಾ 6.5 ಅಂಕಗಳೊಂದಿಗೆ ಸಮಬಲ ಸಾಧಿಸಿದ್ದರು. 14ನೇ ಗೇಮ್​ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.ವಿಶ್ವನಾಥನ್ ಆನಂದ್ ನಂತರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನೆನಿಸಿಕೊಂಡಿದ್ದಾರೆ. ಇದಲ್ಲದೆ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

D.Gukesh ರ ಬಗ್ಗೆ ನೋಡುದಾದರೆ:

ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ.ತಮಿಳುನಾಡು ಮೂಲದ ಗುಕೇಶ್ ಮೇ 7, 2006 ರಂದು ಜನಿಸಿದರು. ಅವರ ಪೂರ್ಣ ಹೆಸರು ದೋಮರಾಜು ಗುಕೇಶ್.ಗುಕೇಶ್ ಅವರ ತಂದೆ ವೃತ್ತಿಯಲ್ಲಿ ವೈದ್ಯರಾಗಿದ್ದರೆ, ಅವರ ತಾಯಿ ವೃತ್ತಿಯಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿದ್ದಾರೆ.

D.Gukesh

ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದ D.Gukesh :

ಗುರುವಾರ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನ 14ನೇ ಮತ್ತು ಅಂತಿಮ ಸುತ್ತಿನ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ.ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ.18 ವರ್ಷದ ಗುಕೇಶ್ 7.5-6-5 ಅಂಕಗಳ ಅಂತರದಿಂದ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವ ಪ್ರಶಸ್ತಿಯನ್ನು ತನ್ನ ಪಾಲಿಗೆ ಪಡೆದುಕೊಂಡರು. ಇದರೊಂದಿಗೆ ಬರೋಬ್ಬರಿ 12 ವರ್ಷಗಳ ಬಳಿಕ ಭಾರತೀಯ ಚೆಸ್ ಆಟಗಾರನೊಬ್ಬ ಈ ಪ್ರಶಸ್ತಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಐದು ಬಾರಿಯ ವಿಶ್ವ ಚೆಸ್ ಚಾಂಪಿಯನ್‌ ವಿಶ್ವನಾಥನ್ ಆನಂದ್, D.ಗುಕೇಶ್(Gukesh)ಅವರಿಗೆ ತರಬೇತಿ ನೀಡಿದ್ದರು:

ತನ್ನ ಏಳನೇ ವಯಸ್ಸಿನಲ್ಲಿ ಚೆಸ್ ಆಡಲು ಪ್ರಾರಂಭಿಸಿದ ಗುಕೇಶ್ ಅವರಿಗೆ ಆರಂಭದಲ್ಲಿ ಭಾಸ್ಕರ್ ತರಬೇತಿ ನೀಡುತ್ತಿದ್ದರು. ಇದಾದ ನಂತರ ಐದು ಬಾರಿಯ ವಿಶ್ವ ಚೆಸ್ ಚಾಂಪಿಯನ್‌ ವಿಶ್ವನಾಥನ್ ಆನಂದ್, ಗುಕೇಶ್ ಅವರಿಗೆ ತರಬೇತಿ ನೀಡಿದ್ದರು.2015 ರಲ್ಲಿ ನಡೆದ ಏಷ್ಯನ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನ 9 ವರ್ಷದೊಳಗಿನವರ ವಿಭಾಗದಲ್ಲಿ ಮತ್ತು 2018 ರಲ್ಲಿ ನಡೆದ 12 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವ ಯೂತ್ ಚೆಸ್ ಚಾಂಪಿಯನ್‌ಶಿಪ್ ಗೆದ್ದಿಕೊಂಡಿದ್ದ ಗುಕೇಶ್ (D.Gukesh) ಇದುವರೆಗೆ ಏಷ್ಯನ್ ಯೂತ್ ಚಾಂಪಿಯನ್‌ಶಿಪ್ನಲ್ಲಿ ಐದು ಚಿನ್ನದ ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

D. Gukesh

ಉಕ್ಕಿ ಬಂದ ಆನಂದದ ಕಣ್ಣೀರು (D.Gukesh):

ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಬೆನ್ನಲ್ಲೇ ಭಾರತದ ಡಿ.ಗುಕೇಶ್ ಅವರ ಕಣ್ಣಲ್ಲಿ ಆನಂದಭಾಷ್ಪ ಧಾರೆಯಾಯಿತು. ವಿಶ್ವ ಚಾಂಪಿಯನ್‌ಷಿಪ್ ಗೆಲುವಿನ ಕನಸು ನನಸಾದ ಕ್ಷಣ ಗುಕೇಶ್ ತಮ್ಮ ಭಾವನೆಗಳನ್ನು ತಡೆದುಕೊಳ್ಳಲಿಲ್ಲ. ಅಲ್ಲದೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.18 ವರ್ಷದ ಗುಕೇಶ್, ಫೈನಲ್‌ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಮಣಿಸಿ, ಚಾಂಪಿಯನ್ ಆದರು. 14ನೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.ಪಂದ್ಯ ಟೈ ಬ್ರೇಕರ್ಗೆ ಹೋಗಬೇಕು ಎನ್ನುವಾಗ 55ನೇ ನಿಮಿಷದಲ್ಲಿ ಡಿಂಗ್ ಲಿರೆನ್ ಮಾಡಿದ ಎಡವಟ್ಟಿನ ಲಾಭ ಪಡೆದ ಗುಕೇಶ್ ಅವರು 7.5-6.5 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಜಯದ ನಗೆ ಬೀರಿದ ಬೆನ್ನಲ್ಲೇ ಕಣ್ಣೀರು ಹಾಕಿದರು. ಗುಕೇಶ್ ಭಾವುಕ ಕ್ಷಣದ ವಿಡಿಯೋ, ಫೋಟೋಗಳು ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ .ಮೆಂಟಲ್ ಕಂಡೀಷನಿಂಗ್ ತರಬೇತುದಾರ ಪ್ಯಾಡಿ ಅಪ್ಟನ್ ಅವರೊಂದಿಗೆ ಸ್ಥಳದಲ್ಲಿ ಅವರ ತಂದೆ ರಜನಿಕಾಂತ್ ಸಹ ಹಾಜರಿದ್ದರು. ಮಗ ಜಯದ ನಗೆ ಬೀರುತ್ತಿದ್ದಂತೆ ಅವರ ಖುಷಿಗೆ ಪಾರವೇ ಇರಲಿಲ್ಲ. ಗೆದ್ದ ಬಳಿಕ ಗುಕೇಶ್ ರೂಮ್ನಿಂದ ಓಡೋಡಿ ಬಂದು ತನ್ನ ತಂದೆಯನ್ನು ಗಟ್ಟಿಯಾಗಿ ಅಪ್ಪಿಕೊಂಡರು. ಆನಂದಭಾಷ್ಪ ಸುರಿಸಿ ಅವರ ತೋಳುಗಳಲ್ಲಿ ಬಂಧಿಯಾದರು. ಅವರ ತಂದೆ ಕೂಡ ತೀವ್ರ ಭಾವುಕರಾದರು. ಬಳಿಕ ಪಕ್ಕದಲ್ಲೇ ಇದ್ದ ಕೋಚಿಂಗ್ ಸಿಬ್ಬಂದಿಯನ್ನು ತಬ್ಬಿಕೊಂಡು ಮತ್ತೆ ಕಣ್ಣೀರು ಸುರಿಸಿದರು. ಗುಕೇಶ್ ತಂಡದ ಕಾರನ್ನು ಹತ್ತಿದರೂ ಅವರ ಕಣ್ಣಲ್ಲಿ ನೀರು ಜಿನುಗುತ್ತಲೇ ಇತ್ತು. ಇದೇ ವೇಳೆ ತಮ್ಮ ತಾಯಿಗೆ ಕರೆ ಮಾಡಿ ಸಂತೋಷವನ್ನು ಹಂಚಿಕೊಂಡರು.

ವಿಶ್ವನಾಥನ್ ಆನಂದ್ ಬಳಿಕ ಈ ಪ್ರಶಸ್ತಿ ಗೆದ್ದ ಭಾರತದ ಎರಡನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ D.Gukesh:

ಚದುರಂಗ ಚತುರ ಗುಕೇಶ್ ಈ ಸಾಧನೆಗೈದ ವಿಶ್ವದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಗೆ ಭಾಜನರಾಗಿದ್ದಾರೆ. ಅಲ್ಲದೆ, ವಿಶ್ವನಾಥನ್ ಆನಂದ್ ಬಳಿಕ ಈ ಪ್ರಶಸ್ತಿ ಗೆದ್ದ ಭಾರತದ ಎರಡನೇ ಆಟಗಾರನೂ ಕೂಡ ಹೌದು. ಆದರೆ ಗುಕೇಶ್ ಪ್ರಶಸ್ತಿ ಗೆಲ್ಲುವ ಕನಸು ಇವತ್ತು, ನಿನ್ನೆಯದ್ದಲ್ಲ, ಸರಿ ಸುಮಾರು ತನ್ನ 8ನೇ ವಯಸ್ಸಿನಲ್ಲಿ ಕಂಡಿದ್ದ ಕನಸು ಇದು. ಹೌದು, ವಿಶ್ವ ಚೆಸ್ ಚಾಂಪಿಯನ್ ಗೆಲ್ಲಬೇಕೆಂದು ತನ್ನ 8ನೇ ವಯಸ್ಸಿನಲ್ಲೇ ಕನಸು ಕಂಡಿದ್ದರಂತೆ. ಇದೀಗ ಆ ಕನಸು ನನಸಾಗಿದೆ. ಇದೇ ವೇಳೆ ತನ್ನ ಜೊತೆಗಿದ್ದ ತಂದೆಯನ್ನು ಗಟ್ಟಿಯಾಗಿ ಅಪ್ಪಿಕೊಂಡು ಕಣ್ಣೀರು ಹಾಕಿದ್ದಾರೆ. ಅಮ್ಮನಿಗೆ ಕರೆ ಮಾಡಿ ಸಂತೋಷ ಹಂಚಿಕೊಂಡಿದ್ದಾರೆ. ತರಬೇತಿ ನೀಡಿದವರನ್ನು ಕೂಡ ತಬ್ಬಿಕೊಂಡು ಕಣ್ಣೀರು ಸುರಿಸಿದ್ದಾರೆ.

ತನ್ನ 8 ವಯಸ್ಸಿನಲ್ಲೇ ಕನಸು ಕಂಡಿದ್ದೆ ಎಂದ D.Gukesh:

ಗೆಲುವಿನ ನಂತರ ಮಾತನಾಡಿದ ಗುಕೇಶ್, ಲಿರೆನ್ ಅವರು ಎಸಗಿದ ಪ್ರಮಾದ ತಮ್ಮ ಜೀವನದ ‘ಅತ್ಯುತ್ತಮ ಕ್ಷಣ’ ಎಂದು ಹೇಳಿದ್ದಾರೆ . ಇದೇ ವೇಳೆ ಲಿರೆನ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಅವರನ್ನು ‘ಇತಿಹಾಸದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು’ ಎಂದು ಕರೆದಿರುವ ಗುಕೇಶ್, ‘ನಿಜವಾದ ವಿಶ್ವ ಚಾಂಪಿಯನ್’ ಎಂದು ಸೋತಿರುವ ಲಿರೆನ್ ಅವರನ್ನು ಶ್ಲಾಘಿಸಿದ್ದಾರೆ. ನಾನು 8 ವರ್ಷಗಳ ಹಿಂದೆಯೇ ಈ ಪ್ರಶಸ್ತಿ ಗೆಲ್ಲುವ ಕನಸು ಕಂಡಿದ್ದೆ. ಭಾರತ 11 ವರ್ಷಗಳ ಹಿಂದೆ ಈ ಪ್ರಶಸ್ತಿ ಗೆದ್ದಿತ್ತು. ಈ ಪ್ರಶಸ್ತಿಯನ್ನು ಮರಳಿ ಭಾರತಕ್ಕೆ ಗೆಲ್ಲುಕ್ಕಿಂತ ಉತ್ತಮವಾದುದು ಯಾವುದೂ ಇಲ್ಲ ಎಂದು ಅವರು ಹೇಳಿದ್ದಾರೆ.

https://visioninglob.com/pushap-2/: Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!! https://visioninglob.com/pushap-2/: Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Pushpa 2

https://www.facebook.com/share/p/o7hcQZF6ZkPR1twp/?mibextid=oFDknk

Rx100

https://www.facebook.com/share/p/ivNJx3qBH2SVaD8z/?mibextid=oFDknk

https://visioninglob.com/rx-100/: Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Related Posts

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia). ಬ್ರಿಸ್ಟೇನ್: ಬಾರ್ಡರ್-ಗಾವಸ್ಕರ್ ಟ್ರೋಫಿಯ ಗಬ್ಬಾ ಟೆಸ್ಟ್‌ನ 4 ನೇ ದಿನದಂದು ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಫಾಲೋ-ಆನ್ ತಪ್ಪಿಸಿದ ಆಕಾಶ್ ದೀಪ್ ಮತ್ತು ಜಸ್ಪ್ರೀತ್ ಬುಮ್ರಾ ಆಟಕ್ಕೆ ತಂಡದ ಕೋಚ್…

Continue reading
ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ ಇಂಡಿಯಾ ಮತ್ತು ಆಸ್ಟ್ರೇಲಿಯಾ(india vs australia) ನಡುವಿನ 2ನೇ ಅಥವಾ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯ ಅಡಿಲೇಡ್ ಓವಲ್…

Continue reading

Leave a Reply

Your email address will not be published. Required fields are marked *

You Missed

ಸುದೀಪ್ ‘max’ ಅಬ್ಬರ : ಫ್ಯಾನ್ಸ್ ಫುಲ್ ಖುಷಿ..!

ಸುದೀಪ್ ‘max’ ಅಬ್ಬರ : ಫ್ಯಾನ್ಸ್ ಫುಲ್ ಖುಷಿ..!

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!