ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರೀ ಸೋಲು ಅನುಭವಿಸಿದ ಭಾರತ (india)2ನೇ ಟೆಸ್ಟ್ನಲ್ಲಿ ಗೆದ್ದು ಸರಣಿ ಸಮಬಲ ಸಾಧಿಸಲು ಛಲ ತೊಟ್ಟಿದೆ. ಮೂರು ಟೆಸ್ಟ್‌ಗಳ ಸರಣಿಯ ಭಾಗವಾಗಿ ಇಂದಿನಿಂದ ಎರಡನೇ ಟೆಸ್ಟ್ ಪುಣೆಯಲ್ಲಿ ಆರಂಭವಾಗಿದೆ. ಟಾಸ್ ಗೆದ್ದಿರುವ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಪಂದ್ಯದಲ್ಲಿ ಭಾರತ ತಂಡ ಪ್ರಮುಖ ಬದಲಾವಣೆಯೊಮದಿಗೆ ಮೈದಾನಕ್ಕೆ ಇಳಿಯುತ್ತಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಸ್ಥಾನದ ರೇಸ್‌ನಲ್ಲಿ ಟೀಮ್ ಇಂಡಿಯಾಕ್ಕೆ(india )ಪುಣೆ ಟೆಸ್ಟ್ ಅತ್ಯಂತ ಮಹತ್ವಪೂರ್ಣದಗಿದೆ. ಭಾರತ 2012ರಿಂದ ತವರಿನಲ್ಲಿ ಒಂದೇ ಒಂದು ಟೆಸ್ಟ್ ಸರಣಿಯನ್ನು ಕಳೆದುಕೊಂಡಿಲ್ಲ. ಸತತ 18 ಸರಣಿ ಗೆದ್ದಿದೆ. ಹಾಗಾಗಿ ಪುಣೆ ಟೆಸ್ಟ್ ಸೇರಿ ಮುಂದಿನ 2 ಟೆಸ್ಟ್ ಪಂದ್ಯವನ್ನ ಗೆದ್ದು ಸರಣಿಯನ್ನ ವಶಪಡಿಸಿಕೊಳ್ಳುವ ಇರಾದೆಯಲ್ಲಿದ್ದು, ಇಂದಿನ ಪಂದ್ಯದಲ್ಲಿ ಮೂರು ಪ್ರಮುಖ ಬದಲಾವಣೆ ಮಾಡಿಕೊಂಡಿದೆ.
ಕಳೆದ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್ನಲ್ಲಿ ನೀರಸ ಪ್ರದರ್ಶನ ತೋರಿದ್ದ ಕನ್ನಡಿಗ ಕೆಎಲ್ ರಾಹುಲ್ರನ್ನ ತಂಡದಿಂದ ಕೈ ಬಿಡಲಾಗಿದೆ. ರಾಹುಲ್ ಜೊತೆಗೆ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ , ಕೂಡ ತಂಡದಿಂದ ಹೊರ ಇಡಲಾಗಿದೆ. ಈ ಮೂವರ ಬದಲಿದೆ ಶುಬ್ಮನ್ ಗಿಲ್ ಆಕಾಶ್ ದೀಪ್, ಮತ್ತು ವಾಷಿಂಗ್ಟನ್ ಸುಂದರ್ 2ನೇ ಟೆಸ್ಟ್ ನಲ್ಲಿ ಆಡಲು ಅವಕಾಶ ಸಿಕ್ಕಿದೆ.
ಕಳೆದ ಟೆಸ್ಟ್‌ಗಿಂತ ಭಿನ್ನವಾದ ಪಿಚ್ ಇದಾಗಿದೆ ಎಂದು ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಲಾಗಿದೆ. ಮೊದಲ ಟೆಸ್ಟ್‌ನಲ್ಲಿ ಗೆಲುವಿನ ಓಟ ಮುಂದುವರಿಸಲು ಪ್ರಯತ್ನಿಸುತ್ತೇನೆ ಎಂದರು. ಗಾಯದಿಂದಾಗಿ ಮ್ಯಾಟ್ ಹೆನ್ರಿ ತಂಡದಿಂದ ಹೊರಗುಳಿದಿದ್ದು, ಅವರ ಬದಲಿಗೆ ಮಿಚೆಲ್ ಸ್ಯಾಂಟ್ನರ್ ಆಡುತ್ತಿದ್ದಾರೆ ಎಂದು ಲ್ಯಾಥಮ್ ಹೇಳಿದ್ದಾರೆ.
ಭಾರತ ತಂಡದ : ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ (ಉಪನಾಯಕ).