ದೇಶದ ಅತೀ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿಕೊಂಡಿರುವ ಜಿಯೋ (Jio) ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಮೂಲಕ ಈಗಾಗಲೇ ಫೇಮಸ್ ಆಗಿದೆ. ವಿ ಹಾಗೂ ಏರ್‌ಟೆಲ್‌ಗೆ ಗಳಿಂಗಿಂತ ಭಿನ್ನವಾಗಿ ಗುರುತಿಸಿಕೊಂಡಿರುವ ಜಿಯೋ ಟೆಲಿಕಾಂ ತನ್ನ ಚಂದಾದಾರರಿಗಾಗಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಪ್ಲ್ಯಾನ್‌ಗಳ ಆಯ್ಕೆ ಭರ್ಜರಿ ಕೊಡುಗೆ ನೀಡಿದೆ.ಅವುಗಳಲ್ಲಿ ಬಹುತೇಕ ಯೋಜನೆಗಳು ಅಧಿಕ ಡೇಟಾ ಸೌಲಭ್ಯ ಪಡೆದಿರುವುದು ಹೈಲೈಟ್ ಎನಿಸಿದೆ. ಅದಾಗ್ಯೂ, ಜಿಯೋದ ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳು ಅತೀ ಹೆಚ್ಚು ಬೇಡಿಕೆಯಲ್ಲಿವೆ.
ಜಿಯೋ (Jio) ಸಂಸ್ಥೆಯ ವಾರ್ಷಿಕ ರೀಚಾರ್ಜ್ ಪ್ಲ್ಯಾನ್‌ಗಳ ಆಯ್ಕೆ ಪಡೆದಿದ್ದು, ಆ ಪೈಕಿ 3599ರೂ ಹಾಗೂ 3999ರೂ. ಪ್ರೀಪೇಯ್ಡ್ ಪ್ಲ್ಯಾನ್ ಹೆಚ್ಚು ಗಮನ ಸೆಳೆದಿದೆ. ಈ ಎರಡು ಪ್ಲ್ಯಾನ್‌ಗಳು ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ಆಕರ್ಷಕ ದೈನಂದಿನ ಡೇಟಾ ಸೌಲಭ್ಯ ಪಡೆದಿದೆ. ಇನ್ನು ಗ್ರಾಹಕರು ಈ ಯೋಜನೆ ರೀಚಾರ್ಜ್ ಮಾಡಿದ್ರೆ, ಒಂದು ವರ್ಷ ಪದೇ ಪದೇ ರೀಚಾರ್ಜ್ ಮಾಡುವ ಅಗತ್ಯ ಇರುವುದಿಲ್ಲ.
ಜಿಯೋ 3599ರೂ. ರೀಚಾರ್ಜ್ ಪ್ಲ್ಯಾನ್
ರಿಲಯನ್ಸ್ ಜಿಯೋ (Jio) ಸಂಸ್ಥೆಯ 3599ರೂ. ರೀಚಾರ್ಜ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯ ಸೌಲಭ್ಯ ಒಳಗೊಂಡಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ದೊರೆಯುತ್ತದೆ.ಹಾಗೆಯೇ ಈ ಯೋಜನೆಯ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಗ್ರಾಹಕರಿಗೆ 912.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿ ಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಸೇವೆಗಳು ಲಭ್ಯ. ಈ ಯೋಜನೆಯನ್ನು ತಿಂಗಳಿಗೆ ಲೆಕ್ಕ ಹಾಕಿದರೆ, 276ರೂ. ಆಗಲಿದೆ.
ಜಿಯೋ 3999ರೂ. ರೀಚಾರ್ಜ್ ಪ್ಲ್ಯಾನ್
ರಿಲಯನ್ಸ್ ಜಿಯೋ (Jio) ಸಂಸ್ಥೆಯ 3999ರೂ. ರೀಚಾರ್ಜ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಇದು ಸಹ 365 ದಿನಗಳ ವ್ಯಾಲಿಡಿಟಿ ಅವಧಿಯ ಸೌಲಭ್ಯ ಒಳಗೊಂಡಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ದೊರೆಯುತ್ತದೆ.ಹಾಗೆಯೇ ಈ ರೀಚಾರ್ಜ್ ಯೋಜನೆಯ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಗ್ರಾಹಕರಿಗೆ 912.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿ ಯಾಗಿ ಫ್ಯಾನ್‌ಕೋಡ್ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ ಸೇವೆಗಳು ಲಭ್ಯವಿರುತ್ತದೆ.
ಜಿಯೋ 1899ರೂ. ರೀಚಾರ್ಜ್ ಪ್ಲ್ಯಾನ್
ರಿಲಯನ್ಸ್ ಜಿಯೋ (Jio) ಸಂಸ್ಥೆಯ 1899 ರೂ. ವ್ಯಾಲ್ಯೂ ರೀಚಾರ್ಜ್ ಪ್ಲ್ಯಾನ್ ಆಗಿದ್ದು, ಇದು 336 ದಿನಗಳ ವ್ಯಾಲಿಡಿಟಿ ಅವಧಿಯ ಸೌಲಭ್ಯ ಒಳಗೊಂಡಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟು 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಸೇವೆಗಳು ಲಭ್ಯವಿರುತ್ತದೆ.